ಮೂಡಿಗೆರೆ: ಆಟವಾಡುತ್ತಿದ್ದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ.
ಗೀತಾ-ಶೇಷಪ್ಪ ದಂಪತಿ ಮಗಳು ಪ್ರಾರ್ಥನಾ (7) ಸಾವನ್ನಪ್ಪಿರುವ ಬಾಲಕಿ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಎಸ್ಟೇಟ್ ನಲ್ಲಿ ಮಗು ಆಟವಾಡುತ್ತಿದ್ದಾಗ ನೀರಿನ ಟ್ಯಾಂಕ್ ಗೆ ಬಿದ್ದಿದೆ.
ಮಗು ನೀರಿನ ಟ್ಯಾಂಕ್ ನಲ್ಲಿ ಬಿದ್ದ ಬಳಿಕ, ಆಕೆಗೆ ಉಸಿರಾಟ ತೊಂದರೆಯಾಗಿ ಕೊನೆಯುಸಿರೆಳೆದಿದ್ದಾಳೆ. ಈ ಘಟನೆ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.