12ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

:ಮೂಡಿಗೆರೆ: ತಾಲ್ಲೂಕಿನ ಹೆಬ್ಬರಿಗೆ ಗ್ರಾಮದ ಸುರೇಶ್ ಎಂಬುವವರ ಮನೆ ಹತ್ತಿರ 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪತ್ತೆಯಾಗಿದೆ.

ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಮ್ಮುಖದಲ್ಲಿ,ಬಣಕಲ್ ನ ಸ್ನೇಕ್ ಆರೀಫ್ ರವರು ಸುರಕ್ಷಿತವಾಗಿ ಹಿಡಿದು ಚಾರ್ಮಾಡಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ ಇತ್ತೀಚಿನ ದಿನಗಳಲ್ಲಿ ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳುತ್ತಿದ್ದು ಅವುಗಳನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಡಲಾಗುತ್ತಿದೆ