ಬಣಕಲ್ :ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಹಾರಿಹೋದ ಘಟನೆ ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಗ್ರಾಮದಲ್ಲಿ ನಡೆದಿದೆ. ಹಬ್ಬರಿಗೆ ಗ್ರಾಮದ ಮಂಜುನಾಥ್ ಎಂಬುವರಿಗೆ ಸೇರಿದ ಮನೆಯ ಮೇಲ್ಚಾವಣಿ ಹಾರುತ್ತಿದ್ದಂತೆ ಮನೆ ಹಿಂಭಾಗದ ಗೋಡೆಯೂ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದರು ಜೀವಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳು ಹಾನಿಗೀಡಾಗಿದೆ ಇಂದು ಸ್ಥಳಕ್ಕೆ ಗ್ರಾಮ ಪಂಚಾಯಿತಿ ಪಿಡಿಓ ಕೃಷ್ಣಪ್ಪ,ಉಪಾಧ್ಯಕ್ಷರಾದ ಇರ್ಫಾನ್, ಸದಸ್ಯ ಸಿರಾಜ್ ರವರು ಭೇಟಿ ನೀಡಿದರು.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ