ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ದಂಡ

ಬಣಕಲ್ :ಬಿಪಿಎಲ್ ಕಾರ್ಡ್ ಅಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಇದೀಗ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಬಿಪಿಎಲ್ ಪಡಿತರ ಚೀಟಿದಾರರ ಮಾಹಿತಿಯನ್ನು ಕಲೆಹಾಕಿದ್ದು ಅಂತಹ ವ್ಯಕ್ತಿಗಳಿಗೆ ನೋಟಿಸ್ ಜಾರಿ ಮಾಡಿ ದಂಡವನ್ನು ವೀಧಿಸುತ್ತಿದೆ ಇದು ನಾಲ್ಕು ಚಕ್ರಗಳ ವಾಹನ ಹೊಂದಿ ಬಿಪಿಎಲ್ ಅಂತ್ಯೋದಯ ಆಹಾರ ಪಡಿತರ ಕಾರ್ಡ್ ಹೊಂದಿದವರಿಗೆ ಶಾಕ್ ನೀಡಿದೆ,ನಾಲ್ಕು ಚಕ್ರ ವಾಹನ ಹೊಂದಿರುವ ರಾಜ್ಯದ 12,584 ಪಡಿತರ ಚೀಟಿದಾರರಿಗೆ ದಂಡ ಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ ಈ ಹಿಂದೆ ನಾಲ್ಕು ಚಕ್ರದ ವಾಹನ ಹೊಂದಿದ್ದಂತ ಈ ಪಡಿತರ ಚೀಟಿದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಹಿಂದಿರುಗಿಸದ ಕಾರಣ ಇದೀಗ ಸರ್ಕಾರ ದಂಡದ ಅಸ್ತ್ರವನ್ನು ಪ್ರಾಯೋಗಿಸಿದೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಆಹಾರ ಶಿರಸ್ತೇದಾರರಾದ ಇಂದ್ರೇಶ್ ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೋದಯ, ಬಿಪಿಎಲ್ ಚೀಟಿ ಹೊಂದಿದ್ದರೆ 2019, ಸೆಪ್ಟೆಂಬರ್ 7ರೊಳಗೆ ವಾಪಾಸ್ ನೀಡುವಂತೆ ಸರಕಾರ ಸೂಚಿಸಿತ್ತು ಆ ಬಳಿಕ ಅವಧಿಯನ್ನು ವಿಸ್ತರಣೆ ಕೂಡ ಮಾಡಲಾಗಿತ್ತು ಆದರೂ ಯಾವುದೇ ನಾಲ್ಕು ಚಕ್ರ ಹೊಂದಿರುವ ಪಡಿತರ ಚೀಟಿದಾರರು ಕಾರ್ಡ್ ಸೇರೆಂಡರ್ ಮಾಡಿರಲಿಲ್ಲ ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ನಾಲ್ಕು ಚಕ್ರಗಳ ವಾಹನ ಹೊಂದಿರುವಂತ ಅಂತ್ಯೋದಯ ಬಿಪಿಎಲ್ ಕಾರ್ಡ್ ದಾರರಿಗೆ ನೋಟಿಸ್ ನೀಡಲಾಗುತ್ತಿದೆ. ನೋಟಿಸ್ ತಲುಪಿದ 7 ದಿನಗಳ ಒಳಗೆ ಕಾರ್ಡುದಾರರು ತಾಲೂಕು ಕಚೇರಿಯ ಆಹಾರ ವಿಭಾಗಕ್ಕೆ ಹಾಜರಾಗಲು ಸೂಚಿಸಲಾಗಿದೆ ದಂಡದ ಮೊತ್ತವನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮೀಸಲಾಗಿದೆ ಅಂತ್ಯೋದಯ ಬಿಪಿಎಲ್ ಕಾರ್ಡ್ ಅನ್ನು ಎಪಿಎಲ್ ಆಗಿ ಪರಿವರ್ತಿಸಲಾಗುತ್ತದೆ ಎಂದು ಹೇಳಿದರು.