ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಜಿಸುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ [MGNREGS] ಯನ್ನು ಜಾರಿಗೊಳಿಸುವ ಕೂಲಿ ಉದ್ಯೋಗದ ಕಾಮಗಾರಿಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆಗಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಕುಶಲ ದೈಹಿಕ ಕೆಲಸ ಮಾಡಲು ಇಚ್ಛಿಸುವ ಗ್ರಾಮೀಣ ಪ್ರದೇಶದ ವಯಸ್ಕರಿಗೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ ನೂರು ದಿನಗಳ ಉದ್ಯೋಗಾವಕಾಶಗಳನ್ನು ಸ್ಥಳೀಯವಾಗಿ ನೀಡಿ, ಬಡಜನರ ಬದುಕನ್ನು ಹಸನಾಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಬಡಜನರನ್ನು ತೊಡಗಿಸಿಕೊಂಡು ಕೃಷಿ ಕಾರ್ಮಿಕರಿಗೆ ಕೂಲಿ ನೀಡುವ ಉದ್ಯೋಗ, ಆಹಾರಭದ್ರತೆ, ದೀರ್ಘಕಾಲ ಬಾಳಿಕೆ ಬರುವಂತಹ ಸ್ವತ್ತುಗಳ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ [MGNREGS] ಕೈಗೊಳ್ಳಲಾಗುತ್ತಿದೆ.
ಬಣಕಲ್ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಕಾತರಿ ಯೋಜನೆ ಅಮೃತ ಸರೋವರ ಅಮೃತ ಕೆರೆ ಅಂಗಳದಲ್ಲಿ ಧ್ವಜಾರೋಹಣ ವನ ಮಹೋತ್ಸವದ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು . ಅಧ್ಯಕ್ಷರು ಅತಿಕಾ ಬಾನು, ಉಪಾಧ್ಯಕ್ಷರು ಇರ್ಫಾನ್ ಹಾಗೂ ಸರ್ವ ಸದಸ್ಯರು ಇದ್ದರು.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಹಾಯಕರು ನಿರ್ದೇಶಕರು ನವೀನ್( ತಾಲೂಕು ಪಂಚಾಯಿತಿ ) ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ ಎನ್ ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಇದ್ದರು ಈ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.ಮಾಜಿ ಸೈನಿಕ ಎನ್ ಟಿ ದಿನೇಶ್, ಗಿರಿಯಪ್ಪ, ಬಿ.ಜಿ.ಲಕ್ಷ್ಮಣ್, ಬಿ ವಾಸುದೇವ್, ( ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು) ಬಣ್ಕಲ್ ಇವರಿಗೆ ಸನ್ಮಾನ ಏರ್ಪಡಿಸಲಾಗಿತ್ತು.
ಸಂಜೀವಿನಿ ಒಕ್ಕೂಟದ ಸದಸ್ಯರು ಗ್ರಾಮಸ್ಥರು ಶಾಲಾ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು ಸ್ವಸಾಯ ಸಂಘದ ಮಹಿಳೆಯರಿಗೆ ಪಾಸ್ ಇನ್ ದ ಬಾಲ್ ಮ್ಯೂಸಿಕಲ್ಚರ್, ಕೆರೆ ದಡ ಸ್ಪರ್ಧೆ, ಏರ್ಪಡಿಸಿ ಬಹುಮಾನ ವಿತರಿಸಲಾಯಿತು ಗಿಡ ನೆಡುವ ಕಾರ್ಯಕ್ರಮ ನನ್ನ ಮಣ್ಣು ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.