ಬಣಕಲ್: ಹಳಿಕೆಯಲ್ಲಿ ಜರುಗಿದ ತಾಲ್ಲೂಕು ಮಟ್ಟದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಬಣಕಲ್ ನ ರಿವರ್ ವ್ಯೂ ಶಾಲಾ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಆದಿತ್ಯ ಕೆ.ಆರ್.ಎತ್ತರ ಜಿಗಿತ ಪ್ರಥಮ ಸ್ಥಾನ. ಮಹಮ್ಮದ್ ತಮೀಮ್ ಉದ್ದಜಿಗಿತ ದ್ವಿತೀಯ ಸ್ಥಾನ ಇವರುಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ನಿತ್ಯ ಶೆಟ್ಟಿ ಎತ್ತರ ಜಿಗಿತ ತೃತೀಯ ಸ್ಥಾನ, ಸ್ಟೀವನ್ ಡಿಸೋಜ 600ಮೀಟರ್ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕರು, ಹಾಗೂ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.
ವರದಿ :ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ