ಬಣಕಲ್ ಗ್ರಾಮ ಸಭೆ:ಹಲವು ಸಮಸ್ಯೆಚರ್ಚೆ

ತಾಲೂಕಿನ ಬಣಕಲ್ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಗ್ರಾಮ ಸಭೆಯಲ್ಲಿ ವಿವಿಧ ಸಮಸ್ಯೆಗಳ ಪರಿಹಾರದ ಕ್ರಮಗಳ ಬಗ್ಗೆ ಹಾಗೂ ಊರಿನ ಶ್ರೇಯೋಭಿವೃದ್ಧಿಗೆ ಅಗತ್ಯವಿರುವ ಕಾರ್ಯಗಳ ಕುರಿತಾಗಿ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರು. ಗ್ರಾಮಗಳಿಗೆ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವಂತೆ ಒತ್ತಾಯಿಸಿದರು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆತಿಕಬಾನು ವಹಿಸಿದ್ದರು. ವೇದಿಯಲ್ಲಿ ಉಪಾಧ್ಯಕ್ಷರಾದ ಇರ್ಫಾನ್, ಗ್ರಾಮಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಪಿ.ಡಿ.ಓ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.ಮೆಸ್ಕಾಂ ಇಲಾಖೆ ವರ್ಗ,ಅರೋಗ್ಯ ಇಲಾಖೆ, ರೈತ ಸಂಪರ್ಕ ಇಲಾಖೆ, ಅರಣ್ಯ ಇಲಾಖೆಯ ಸದಸ್ಯರುಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಸಮಸ್ಯೆ ಪರಿಹರಿಸುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ವರದಿ:✍️ಸೂರಿ ಬಣಕಲ್