2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಚಿಕ್ಕಮಗಳೂರು ಜಿಲ್ಲೇ ಮೂಡಿಗೆರೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ, ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಗರ ಕಾರ್ಯದರ್ಶಿ ರಾಕೇಶ್ ಮರಡಿ ಮಾತನಾಡಿ, ಸರ್ಕಾರ 2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲು ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಎಸ್‌ಎಸ್‌ಪಿ ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಮಂಜೂರಾಗಿರುವುದಾಗಿ ತೋರಿಸುತ್ತಿದ್ದರೂ ವಿದ್ಯಾರ್ಥಿಗಳ ಖಾತೆಗೆ ಹಣ ಬಂದಿಲ್ಲ. ಹಾಗಾಗಿ, ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡುವ ಮೂಲಕ ವಿದ್ಯಾರ್ಥಿಗಳ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ರಿಷಿತ್. ಮನು. ನಿಶಾಂತ್ ಹಾಗೂ ಇತರ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ :✍️ಸೂರಿ ಬಣಕಲ್