ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ ಉರುಳಿದ ಘಟನೆ ಮೂಡಿಗೆರೆ ತಾಲ್ಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಬೆಂಗಳೂರಿನಿಂದ ಹಾಸನ -ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ ಬಸ್ಸಿನಲ್ಲಿದ್ದ 48ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು ಓರ್ವ ಮಹಿಳೆ ಮೃತ ಪಟ್ಟಿದ್ದಾಳೆ. ಯಲಹಂಕದ ಸುರೇಖಾ ಎಂಬ ಮಹಿಳೆ (45)ಮೃತ ಪಟ್ಟಿದ್ದಾರೆ.
ಬೆಳಗಿನ ಜಾವ 4:45 ಸಮಯದಲ್ಲಿ ಘಟನೆ ನಡೆದಿದೆ. ಗಾಯಾಳುಗಳಿಗೆ ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ತಡೆಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಮನವಿ ಮಾಡಿದ್ದರು ತಡೆಗೋಡೆ ನಿರ್ಮಿಸಿಲ್ಲ. ಇದೇ ಜಾಗದಲ್ಲಿ 70ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದೆ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ತಾಜಾ ಉದಾಹರಣೆ.
ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ