ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹರ್ಷ ಮೇಲ್ವಿನ್ ಲಸ್ರದೋ ಆಯ್ಕೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC )ಅಲ್ಪ ಸಂಖ್ಯಾತರ ಘಟಕದ ನೂತನ ಸಂಘಟನಾ ಕಾರ್ಯ ದರ್ಶಿಯಾಗಿ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ ಹರ್ಷ ಮೇಲ್ವಿನ್ ಲಸ್ರದೋ ಅವರನ್ನು ಆಯ್ಕೆ ಮಾಡಿದೆ.
ಪಕ್ಷಕ್ಕಾಗಿ ಮಾಡುತ್ತಿರುವ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಪಕ್ಷ ಈ ಜವಾಬ್ದಾರಿಯನ್ನು ವಹಿಸಿದೆ.