ಬಣಕಲ್ ನಜರೆತ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಬೆಳೆಗಾರರ ಸಂಘದ ಅಧ್ಯಕ್ಷರಾದ ಬಿ ಎಸ್ ಜಯರಾಮ್ ಗೌಡ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸಬೇಕಾಗಿದೆ. ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ. ಶಾಲೆಯ ಪರಿಸರವನ್ನು ಶುಚಿತ್ವದಿಂದಿಡುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಿ ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರ ಜಾಗೃತಿಯ ಕಿರು ನಾಟಕ ಹಾಗೂ ನೃತ್ಯವನ್ನು ಪ್ರದರ್ಶಿಸಿದರು. ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಹಿಲ್ಡ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಲವ ಕುಮಾರ್ ಶಿಕ್ಷಕಿಯರಾದ ಅಬಿದಾ, ಚಂದನ, ಯಾಸ್ಮಿನ್, ಹಲೀಮಾ, ಅನುಶ್ರೀ, ಕೇಸರಿ, ಲಕ್ಷ್ಮಿ ದೇವಿ, ಸಿಸ್ಟರ್ ಅಮಲ್ ರಾಣಿ ಉಪಸ್ಥಿತರಿದ್ದರು.
ವರದಿ :✍️ಸೂರಿ ಬಣಕಲ್