ಬಣಕಲ್ ನಜರೆತ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಧೃತಿ ಎಸ್ ಜಿ ಪಂಜಾಬ್ ನಲ್ಲಿ ನಡೆಯುತ್ತಿರುವ ಸಿ. ಐ. ಎಸ್.ಸಿ.ಇ ರಾಷ್ಟ್ರ ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ 19ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಧೃತಿ ಮೂಡಿಗೆರೆ ತಾಲ್ಲೂಕು ಬಾಸ್ತಿ ಗ್ರಾಮದ ಗಿರೀಶ್ ಹಾಗೂ ಅಶ್ವಿನಿ ದಂಪತಿಗಳ ಪುತ್ರಿಯಾಗಿದ್ದಾರೆ.ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದದವರು ಮತ್ತು ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ವರದಿ ✍️ಸೂರಿ ಬಣಕಲ್