ಬ್ರಹ್ಮಶ್ರೀ ನಾರಾಯಣ ಗುರು ಮಲಯಾಳಿ ಸಂಘದ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಬಣಕಲ್ ನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನ

ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಬಣಕಲ್ ಸುಭಾಷ್ ನಗರದ ಚಾಮುಂಡೇಶ್ವರಿ ದೇವಸ್ಥಾನ ದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಓಣಂ ಪ್ರಯುಕ್ತ ಹೂವಿನ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. 10-12ಪಾಸಾದ ಶಾಲಾ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನಕಾರ್ಯಕ್ರಮವನ್ನು ಹಮ್ಮಿಕೊಳ್ಳಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಯೋಧರಾದ ದಿನೇಶ್ ಬಣಕಲ್ ಮತ್ತು ಬಿಕೆ ಲಕ್ಷ್ಮಣ್ ನಿವೃತ್ತ ಯೋಧರು ಸಬ್ಳಿ ಆಗಮಿಸಿದ್ದರು.

ಈ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ವಿದ್ಯಾಭಾರತಿ ವಿದ್ಯಾ ಸಂಸ್ಥೆಯ ಶಿಕ್ಷಕರಾದ ವಸಂತ್ ಮತ್ತು ಭಕ್ತೇಶ್ಇದ್ದರು. ಈ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಮಲಯಾಳಿ ಸಂಘ ಬಣಕಲ್ ಹಿರೆಬೈಲ್ ನ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಹಾಜರಿದ್ದರು.

ವರದಿ ✍️ಸೂರಿ ಬಣಕಲ್