ಬಣಕಲ್ :ತರುವೆ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಳೆಹೊನ್ನೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿ ಕಡೂರಿನಲ್ಲಿ ನಡೆಯುವ ಮೈಸೂರು ವಿಭಾಗೀಯಮಟ್ಟಕ್ಕೆ ಆಯ್ಕೆಯಾದರು.
ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕ ವರ್ಗ,ದೈಹಿಕ ಶಿಕ್ಷಕ ರವೀಂದ್ರ ಪೂಜಾರಿ.ಶಿಕ್ಷಕ ಎಚ್ ಎಸ್ ರವಿ ಸಿಬ್ಬಂದಿ ವರ್ಗ ಅಭಿನಂದಿಸಿದರು.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ