ಬಣಕಲ್ ವಿದ್ಯಾಭಾರತಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನದ ಅಂಗವಾಗಿ ಮಾನವ ಸರಪಳಿ

ಬಣಕಲ್ :26.11.2024 ರಂದು ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನದ ಅಂಗವಾಗಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಪೂರ್ವ ಪೀಠಿಕೆಯನ್ನು ಬೋಧಿಸಲಾಯಿತು.

ಈ ಒಂದು ಕಾರ್ಯಕ್ರಮದಲ್ಲಿ ಪೂರ್ವ ಪೀಠಿಕೆಯನ್ನು ಸಮಾಜ ವಿಜ್ಞಾನದ ವಿಷಯ ಶಿಕ್ಷಕಿಯಾದ ಲೀಲಾಮಣಿ ಪಿ.ವಿ ಬೋಧಿಸಿ ಸಮಾನತೆ, ಜಾತ್ಯಾತೀತ, ಹಾಗೂ ಸಂವಿಧಾನದ ಬಗ್ಗೆ ಮಾಹಿತಿಯನ್ನು ತಿಳಿಸಿಕೊಟ್ಟರು ಇದರೊಂದಿಗೆ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು

ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಉಪಸ್ಥಿತಿ ಇದ್ದರು.