ಬಣಕಲ್ : ನಾಯಿ ದಾಳಿ ನಡೆಸಿದ ಪರಿಣಾಮ 5ವರ್ಷದ ಬಾಲಕಿ ಗಾಯಗೊಂಡ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.
ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ.ಆಗಬಹುದಾಗಿದ್ದ ದೊಡ್ಡ ಗಂಡಾಂತರದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿದಿನಗಳು. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.
ವರದಿ :✍️ಸೂರಿ ಬಣಕಲ್
