*ಬಣಕಲ್ :ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನಾರಾಯಣ ಗೌಡ ಬಿ.ಎಸ್. ಉಪಾಧ್ಯಕ್ಷರಾಗಿ ರಂಗನಾಥ್ ಬಿ.ಆರ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಇವರಿಬ್ಬರನ್ನು ಹೊರತು ಪಡಿಸಿದರೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ಪ್ರಕಟಿಸಿದರು.
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ನಾರಾಯಣ ಗೌಡರು ಎಲ್ಲಾ ಕೃಷಿಕ ಬಾಂಧವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ಸಂಘದ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು ಹಾಗೆ ಸಂಘದಿಂದ ರೈತರಿಗೆ ದೊರೆಯುವ ಎಲ್ಲಾ ಸೌಲಭ್ಯಗಳ ಜೊತೆಯಲ್ಲಿ ಸಾಧ್ಯವಾಗುವ ಎಲ್ಲಾ ರೀತಿಯ ಸಹಕಾರವನ್ನು ಕೊಡಲು ಬದ್ಧನಾಗಿದ್ದೇನೆ ಎಂದರು.
ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿ ಆರ್ ರಂಗನಾಥ್ ಮಾತನಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಜಯಗಳಿಸಿ ಆಡಳಿತ ಮಂಡಳಿ ಉಪಾಧ್ಯಕ್ಷನಾಗಿ ಅಧಿಕಾರ ಪಡೆದುಕೊಂಡಿರುವುದು ಖುಷಿ ತಂದಿದೆ. ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿದ ಸಮಸ್ತ ಕಾರ್ಯಕರ್ತ ಬಂಧುಗಳಿಗೆ ಪಕ್ಷದ ಮುಖಂಡರುಗಳಿಗೆ ಹಾಗೆ ರೈತಾಪಿ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ನಿರ್ದೇಶಕರಾಗಿ ಆಯ್ಕೆಯಾದ ಅಭ್ಯರ್ಥಿಗಳಾದ ಭರತ್ ಬಿ.ಎಂ ವಿಕ್ರಂ ಬಿ. ಎಸ್ ಗಜೇಂದ್ರ ಟಿ.ಎಂ.ಅಭಿಲಾಷ್ ಎ.ಆರ್.ಕಲ್ಲೇಶ್ ಬಿ. ಎಸ್. ಕೆ.ಕೆ. ಯತೀಶ್.ಮಮತಾ ಎಚ್. ಕೆ.ರವೀಂದ್ರ ಬಿ.ಎಂ.ಲಕ್ಷ್ಮಿ ಬಿ.ಬಿ ಶರತ್ ಬಿ.ಬಿ. ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು.
ವರದಿ :✍️ಸೂರಿ ಬಣಕಲ್