ಹರ್ಷ ಮೇಲ್ವಿನ್ ಲಾಸ್ರದೋ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಆಯ್ಕೆ

ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಹಾಗೂ ವಖ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ ಜ್ಯೋತಿ ಪ್ರಕಾಶ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಈ ನೇಮಕವು ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮೇಲ್ವಿನ್ ಅವರುಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆ.ಪಿ. ಸಿ.ಸಿ ಯ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ ಅವರ ಪಕ್ಷ ನಿಷ್ಠೆಗೆ ಈಗ ಉನ್ನತ ಹುದ್ದೆ ಒಲಿದಿದೆ.

ವರದಿ :✍️ಸೂರಿ ಬಣಕಲ್