ಬಣಕಲ್ : ಒಣಗಿದ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಮೂಡಿಗೆರೆ ತಾಲೂಕ್ಕಿನ ನಿಡವಾಳೆ ಸಮೀಪ ನಡೆದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬ, ತಂತಿಗಳು ಮುರಿದು ರಸ್ತೆಗೆ ಬಿದ್ದಿದೆ. ಅದೃಷ್ಟವಷಾತ್ ಅ ಸಮಯದಲ್ಲಿ ರಸ್ತೆಯಲ್ಲಿ ವಾಹನ ಸಂಚಾರ ಇರದ ಕಾರಣ ದೊಡ್ಡ ಅವಘಡ ತಪ್ಪಿದೆ. ವಿಷಯ ತಿಳಿದ ಕೂಡಲೇ ಗ್ರಾಮಸ್ಥರು ಬೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿ ವಿದ್ಯುತ್ ಸಂಪರ್ಕ ಕಡಿತಗೋಳಿಸಿದ್ದಾರೆ.
ಸ್ಥಳೀಯರು ಹಾಗೂ ವಾಹನ ಸವರಾರು ಸೇರಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ತಕ್ಷಣಕ್ಕೆ ತೆರವು ಗೊಳಿಸುವುದರ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ವರದಿ :✍️ಸೂರಿ ಬಣಕಲ್