ಕೊಟ್ಟಿಗೆಹಾರ : ಚಾರ್ಮಾಡಿ ಘಾಟ್ ಮುಖ್ಯ ರಸ್ತೆಗೆ ಸಂಪರ್ಕಿಸುವ ದೇವನಗುಲ್ ಗ್ರಾಮದ ಅಡ್ಡ ದಾರಿಯಲ್ಲಿ ರಾತ್ರಿ ವೇಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಗೇಟ್ ನಿರ್ಮಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಸೂಚನೆಯಂತೆ, ಬಣಕಲ್ ಠಾಣೆಯ PSI ರೇಣುಕಾ ನೇತೃತ್ವದಲ್ಲಿ ಪೊಲೀಸರು ಮತ್ತು ಸ್ಥಳೀಯರು ಸೇರಿ 12 ಅಡಿ ಉದ್ದದ ಗೇಟ್ ಅಳವಡಿಸಿದರು. ರಸ್ತೆ ಎರಡೂ ಬದಿಗಳಲ್ಲಿ ಗುಂಡಿ ತೋಡಿ, ರಾತ್ರಿ ವೇಳೆ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ.
ಹೊಸ ನಿಯಮದ ಪ್ರಕಾರ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಈ ದಾರಿ ಬಂದ್ ಆಗಲಿದ್ದು, ಗೇಟ್‌ನ ಕೀಲಿಯನ್ನು ಕೊಟ್ಟಿಗೆಹಾರ ಚೆಕ್‌ಪೋಸ್ಟ್ ಸಿಬ್ಬಂದಿ ವಶದಲ್ಲಿಟ್ಟುಕೊಂಡು ನಿರ್ವಹಿಸಲಿದ್ದಾರೆ.
ಈ ಕ್ರಮದಿಂದ ಅಕ್ರಮ ಸಾರಿಗೆ ಮತ್ತು ಸಂಶಯಸ್ಪದ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ