ಅಥ್ಲೆಟಿಕ್ ಕ್ರೀಡಾಕೂಟ:ಬಣಕಲ್ ಪ್ರೌಢಶಾಲೆಯ ಕಾರ್ತಿಕ್ ರಾಜ್ಯಮಟ್ಟಕ್ಕೆ ಆಯ್ಕೆ

ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ14ರ ವಯೋಮಾನದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, 100ಮೀಟರ್ ಓಟದಲ್ಲಿ ದ್ವಿತೀಯ, ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ವಿಜೇತ ಕ್ರೀಡಾಪಟುವಿಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಶ್ರೀನಿವಾಸ್, ಶಿಕ್ಷಕರು, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಅಭಿನಂದಿಸಿದ್ದಾರೆ.

ವರದಿ: ✍️ಸೂರಿ ಬಣಕಲ್