ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ:ಬಣಕಲ್ ವಿದ್ಯಾಭಾರತಿ ಶಾಲೆಯ ಸಾನಿಧ್ಯ ಪ್ರಥಮ

ಬಣಕಲ್ :ದಿನಾಂಕ : 06 : 12 : 2025ರಂದು ಕಡೂರಿನ ಗಿರಿಯಾಪುರದ ಗುರುಕೃಪಾ ಪ್ರೌಢಶಾಲೆಯಲ್ಲಿ ನಡೆದ 2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳಲ್ಲಿ ಶ್ರೀ ವಿದ್ಯಾ ಭಾರತಿ ವಿದ್ಯಾಸಂಸ್ಥೆ ಬಣಕಲ್ ನ ವಿದ್ಯಾರ್ಥಿನಿ ಸಾನಿಧ್ಯ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಮತ್ತು ಇದೇ ಶಾಲೆಯ ಪ್ರೌಢಶಾಲಾ ವಿಭಾಗದ ಮೋಕ್ಷಿತಾ.ಆರ್. ತುಳು ಭಾಷಣದಲ್ಲಿ ಹಾಗೂ ಸಾತ್ವಿಕ.ಬಿ.ಎಸ್.ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಪೋಷಕರು, ಶಾಲೆ ಮತ್ತು ತಾಲ್ಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

ಜಿಲ್ಲಾಮಟ್ಟದಪ್ರತಿಭಾಕಾರಂಜಿಯಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಶಾಲೆಯನ್ನು ಪ್ರತಿನಿಧಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಶಾಲಾ ಶಿಕ್ಷಕರು ಹಾಗೂ ಪೋಷಕರು ಅಭಿನಂದಿಸಿದ್ದಾರೆ.