ಬಣಕಲ್ :ದ್ವಿತೀಯ ಪಿಯುಸಿಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮೂರು ವಿಭಾಗಗಳಿಂದ ಈ ಬಾರಿಯ ವಾರ್ಷಿಕ ಪರೀಕ್ಷೆ ಬರೆದ 35 ವಿದ್ಯಾರ್ಥಿಗಳಲ್ಲಿ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 26 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ನಾಫಿಯ 537 ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದರೆ, ಕಲಾ ವಿಭಾಗದ ವಿದ್ಯಾರ್ಥಿನಿ ಕು. ರೇಖಾ 532 ಅಂಕಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ರಾಜ್ಯದಲ್ಲಿ ಶೇಕಡ 100 ಫಲಿತಾಂಶ ನೀಡಿದ 74 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮೂಡಿಗೆರೆ ತಾಲೂಕಿನ ಬಣಕಲ್ ನ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೂಡ ಒಂದು ಎಂಬುದು ಹೆಮ್ಮೆಯ ವಿಚಾರವಾಗಿದೆ.
ಬಣಕಲ್ ಕಾಲೇಜಿನ ಈ ಸಾಧನೆಗೆ ಎಲ್ಲಾ ವಿದ್ಯಾರ್ಥಿಗಳ ಸತತ ಪರಿಶ್ರಮ ಹಾಗೂ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಮಾರ್ಗದರ್ಶನ ಕಾರಣವಾಗಿದ್ದು, ಕಾಲೇಜು ಅಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರ ಸಹಕಾರ ಈ ಸಾಧನೆಗೆ ಪ್ರೇರಣೆಯಾಗಿದೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ