ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾಗಿ ಸಚಿನ್ ಮರ್ಕಲ್ ನೇಮಕ

ಬಣಕಲ್ :ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾಗಿ ಸಚಿನ್ ಮರ್ಕಲ್ ನೇಮಕ ಗೊಂಡಿದ್ದಾರೆ.
ತಾಲ್ಲೂಕ್ಕಿನಲ್ಲಿ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ನನ್ನನ್ನು ಗುರುತಿಸಿ ನೇಮಕ ಮಾಡಿರುವುದಕ್ಕೆ ಶಾಸಕರಿಗೆ ಹಾಗೂ ಜಿಲ್ಲಾ ತಾಲ್ಲೂಕು ಅಧ್ಯಕ್ಷರು ಮತ್ತು ಎಲ್ಲಾ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು.ಸಾಮಾಜಿಕ ಜಾಲತಾಣವನ್ನು ಮತ್ತಷ್ಟು ಗಟ್ಟಿಗೊಳಿಸಿ ಪಕ್ಷಕ್ಕೆ ಮತ್ತಷ್ಟು ಬಲ ತರುವ ನಿಟ್ಟಿನಲ್ಲಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು.
ವರದಿ ✍️ಸೂರಿ ಬಣಕಲ್