ಚೇಗೂ ಗ್ರಾಮಸ್ಥರಿಂದ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಚಿನ್ ಮರ್ಕಲ್ ಅವರಿಗೆ ಸನ್ಮಾನ

ಮೂಡಿಗೆರೆ ತಾಲ್ಲೂಕ್ಕಿನ ಚೇಗೂ ಗ್ರಾಮಕ್ಕೆ ಸೋಮವಾರ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ಸಚಿನ್ ಮರ್ಕಲ್ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.


ರೇಷನ್ ಕಾರ್ಡ್, ವಿದ್ಯುತ್, ರಸ್ತೆ ಮತ್ತು ಹಕ್ಕು ಪತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಕರೆ ಮಾಡಿ ಸಮಸ್ಯೆಗಳಿಗೆ ಆದಷ್ಟು ಬೇಗ ಸೂಕ್ತ ಪರಿಹಾರ ಒದಗಿಸಲು ತಿಳಿಸಿದರು.ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೆ ಪರಿಹರಿಸಿದರು.

ಇದೆ ಸಂದರ್ಭದಲ್ಲಿ ಮಾತನಾಡಿದ ಚೇಗೂ ಗ್ರಾಮಸ್ಥ ಪೆಡ್ಡಿ ಲೋಬೊ ಗ್ರಾಮದಲ್ಲಿ ಇರುವ ಸಮಸ್ಯೆಗಳ ಬಗ್ಗೆ ಸಾಕಷ್ಟು ಭಾರಿ ಜನ ಪ್ರತಿನಿದಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಸಮಸ್ಯೆಗಳನ್ನು ಪರಿಹರಿಸಲು ಯಾರು ಮುಂದಾಗಿಲ್ಲ ಎಂದರು.


ಗ್ರಾಮಸ್ಥರೆಲ್ಲರೂ ಸೇರಿ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸಚ್ಚಿನ್ ಮರ್ಕಲ್ ಅವರನ್ನು ಚೇಗೂ ಗ್ರಾಮಕ್ಕೆ ಭೇಟಿ ನೀಡುವಂತೆ ಮನವಿ ಮಾಡಲಾಗಿತ್ತು ಅದರಂತೆ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿದಾಗ ಗ್ರಾಮದ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತರುವಂತೆ ಒತ್ತಾಯಿಸಲಾಯಿತು ಎಂದರು.
ಇದೆ ಸಂದರ್ಭದಲ್ಲಿ ಸಚಿನ್ ಮರ್ಕಲ್ ಅವರನ್ನುಚೇಗೂ ಗ್ರಾಮಸ್ಥರು ಸನ್ಮಾನಿಸಿದರು.