ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿರುವ ದೇವರಮನೆ, ಪ್ರಸಿದ್ಧ ಶ್ರೀ ಕಾಲಭೈರವೇಶ್ವರ ದೇವಾಲಯಕ್ಕೆ ಮತ್ತು ರೋಮಾಂಚಕಾರಿ ತಾಣಗಳಿಗೆ ಹೆಸರುವಾಸಿಯಾಗಿದೆ. ಈ ಸುಂದರ ಬೆಟ್ಟದ ತಾಣವು, ಹಸಿರು ಹಾಸಿನಿಂದ ಕೂಡಿದ್ದು ಪ್ರವಾಸಿಗರಿಗೆ ಹೇಳಿ ಮಾಡಿಸಿದ ಜಾಗವಾಗಿದೆ.
ದೇವರಮನೆ ಶ್ರದ್ಧಭಕ್ತಿಯ ಕೇಂದ್ರದ ಜೊತೆಗೆ ಪ್ರಮುಖ ಪ್ರವಾಸಿತಾಣವೂ ಆಗಿದೆ. ಇಲ್ಲಿಗೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ,ದೇವರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಾತ್ರ ಸಂಪೂರ್ಣ ಹದಗೆಟ್ಟುಹೋಗಿದೆ.
ಈ ಬಗ್ಗೆ ಸ್ಥಳೀಯ ಗ್ರಾಮಸ್ಥರು ಶಾಸಕರು, ಅಧಿಕಾರಿಗಳ ಗಮನಕ್ಕೆ ಸಾಕಷ್ಟು ಭಾರಿ ತಂದರೂ ಯಾವುದೇ ಪ್ರಯೋಜನವಾಗಿಲ್ಲ.ದೊಡ್ಡ ದೊಡ್ಡ ಗುಂಡಿಗಳು ಬಿದ್ದ ರಸ್ತೆಯಲ್ಲಿ ಪ್ರತಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಗುಂಡಿಗಳನ್ನು ತಪ್ಪಿಸುತ್ತ ವಾಹನ ಸವಾರರು ನಿದಾನವಾಗಿ ಹೋಗುವ ಅನಿವಾರ್ಯತೆಯಿಂದ ಸ್ಥಳೀಯ ಗ್ರಾಮಸ್ಥರು ಕೆಲಸದ ನಿಮಿತ್ತ ನಗರಕ್ಕೆ ಬರಲು ಗಂಟೆಗಟ್ಟಲೆ ತೆಗೆದುಕೊಳ್ಳುತ್ತಿದ್ದರು.
ರಸ್ತೆ ಅವ್ಯವಸ್ಥೆ ಬಗ್ಗೆ ತಲೆಕೆಡೆಸಿಕೊಳ್ಳದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೆಸೆತ್ತ ಗ್ರಾಮಸ್ಥರು ತಮ್ಮ ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಕಾರ್ಯ ಮಾಡಿ ಮಾದರಿ ಎನಿಸಿದರು.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ