ಬಣಕಲ್ ಪ್ರೌಢಶಾಲೆಯಲ್ಲಿ ಶನಿವಾರದಂದು ವಿದ್ಯಾರ್ಥಿ ಸಂಘದ ಉದ್ಘಾಟನ ಕಾರ್ಯಕ್ರಮ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬಿ. ಎಲ್ ದಿವಾಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ
ವಿದ್ಯಾರ್ಥಿಗಳು ಸಮಾಜದಿಂದ ಒಳ್ಳೆಯ ವಿಷಯ ಮಾತ್ರ ಕಲಿಯಬೇಕು. ತಂದೆ, ತಾಯಿ ಮತ್ತು ಗುರುಗಳನ್ನು ಗೌರವಿಸಬೇಕು. ಉತ್ತಮ ಸಂಸ್ಕಾರ ಹೊಂದಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಕೆ.ಬಿ. ಸುರೇಶ್ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಆಗಮಿಸಿ ಮಕ್ಕಳಿಗೆ ಪೋಷಕರಿಗೆ ಹಿತವಚನ ನೀಡಿದರು.ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಮಾಡಬೇಕೆಂದು ಪೋಷಕರಿಗೆ ಕಿವಿ ಮಾತನ್ನು ಹೇಳಿದರು.

ಮುಖ್ಯ ಶಿಕ್ಷಕ ಶ್ರೀನಿವಾಸ್ ಮಾತನಾಡಿ
ಸ್ವಾಗತ ಕಾರ್ಯಕ್ರಮದ ಮೂಲಕ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಲ್ಲಿರುವ ಆತಂಕವನ್ನು ಹೋಗಲಾಡಿಸಬೇಕು. ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಿಚಾರ ಕುರಿತು ಚರ್ಚಿಸಿ ವಿಷಯ ವಿನಿಮಯ ಮಾಡಿಕೊಳ್ಳಬೇಕು. ಇದನ್ನು ಹೊರತುಪಡಿಸಿ ಇತರೇ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಸಲಹೆ ನೀಡಿದರು.

8ನೇ ತರಗತಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಕ್ಕಳು ಕವನ ವಾಚನ, ಚಲನಚಿತ್ರ ಗೀತೆ, ನೃತ್ಯ, ಭಕ್ತಿಗೀತೆ, ಜನಪದ ಗೀತೆ ಮುಂತಾದ ಕಾರ್ಯಕ್ರಮವನ್ನು ನೀಡಿ ಎಲ್ಲರನ್ನೂ ರಂಜಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಸಿಬ್ಬಂದಿವರ್ಗ ಹಾಜರಿದ್ದರು.
ವರದಿ: ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ