ಮೂಡಿಗೆರೆ:ಸ್ಥಳೀಯ ಮೂಡಿಗೆರೆ ರೈತ ಉತ್ಪಾದಕರ ಸಹಕಾರ ಸಂಘಕ್ಕೆ ಇಂದು ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಬಿ. ಬಿ. ನಿಂಗಯ್ಯ ಅವರು ಭೇಟಿ ನೀಡಿ, ಸಂಘದ ವಿವಿಧ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಸ್ತುತ ಕಾರ್ಯನಿರ್ವಹಣೆ ಹಾಗೂ ಮುಂದಿನ ಬೆಳವಣಿಗೆಯ ಕುರಿತು ಚರ್ಚಿಸಿದ ಅವರು, ಸಂಘವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಅಗತ್ಯವಿರುವ ಉಪಯುಕ್ತ ಸಲಹೆ-ಸೂಚನೆಗಳನ್ನು ನೀಡಿದರು.
“ಸಂಘಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಸದಸ್ಯರನ್ನಾಗಿ ಸೇರ್ಪಡೆಗೊಳಿಸುವ ಮೂಲಕ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು. ಸಂಘದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ರೈತರ ಹಿತರಕ್ಷಣೆಗೆ ನನ್ನ ಕಡೆಯಿಂದ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡಲಾಗುವುದು,” ಎಂದು ಬಿ. ಬಿ. ನಿಂಗಯ್ಯ ಅವರು ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಎಚ್. ಕೆ ಪೂರ್ಣೇಶ್, ಉಪಾಧ್ಯಕ್ಷರಾದ ಎಚ್ ಪಿ ಶಂಕರ್, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಉಮಾಮಹೇಶ್ವರ, ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರದ ನಿರ್ದೇಶಕರಾದ ಎ. ಟಿ. ಕೃಷ್ಣಮೂರ್ತಿ ವಲಯ ಸಂಶೋಧನಾ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದೀಕ್ಷಾಕರಾದ ಸ್ವಾಮಿ, ವಿಜ್ಞಾನಿ ಕಿರಣ್, ಹಾಗೂ ಮೂಡಿಗೆರೆ ರೈತ ಉತ್ಪಾದಕ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾದ ಸೃಷ್ಟಿಯವರು ಈ ಸಂಧರ್ಭದಲ್ಲಿ ಹಾಜರಿದ್ದರು
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ