ಬಣಕಲ್ :ಬಣಕಲ್ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ನ ದಿನಸಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ.
ಅಸ್ಸಾಂ ಮೂಲದ ಜನರಿಗೆ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನೆಡೆಸಿ ನಯಜ್ ಅಹ್ಮದ್ (58)ಎಂಬ ವ್ಯಕ್ತಿಯನ್ನು ಸ್ಥಳದಲ್ಲಿ ತರಾಟೆಗೆ ತೆಗೆದುಕೊಂಡು ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಸುತ್ತಮುತ್ತಲಿನ ಎಸ್ಟೇಟ್ ಗಳಲ್ಲಿ ಕೆಲಸ ಮಾಡುವ ಅಸ್ಸಾಂ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡಲು ಚಿಕ್ಕಮಗಳೂರಿನ ಇಕ್ಬಾಲ್ ಎಂಬುವವರಿಂದ ಖರೀದಿ ಮಾಡಿ ಇಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಸ್ಥಳದಲ್ಲಿದ್ದ 11ಕೆಜಿ ಗೋ ಮಾಂಸ ಹಾಗೂ ಮಾಂಸ ಮಾರಾಟದಿಂದ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಈ ಸಂಬಂಧ ನಯಜ್ ಅಹ್ಮದ್ ವಿರುದ್ಧ ಬಣಕಲ್ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ