ಬಣಕಲ್ : ಮಾಕೋನಹಳ್ಳಿಯಲ್ಲಿ ನಡೆದ ಮೂಡಿಗೆರೆ ತಾಲ್ಲೂಕು ಮಟ್ಟದ ಪ್ರೌಢ ಶಾಲಾ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಬಾಲಕರ ವಿಭಾಗದ ಕಬಡ್ಡಿಯಲ್ಲಿ ಪ್ರಥಮ ಸ್ಥಾನ,
ಬಾಲಕರ ವಿಭಾಗದ ಕೋಕೋದಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ. ಮುಖ್ಯೋಪಾಧ್ಯಾಯರು. ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ