ಅಧಿಕಾರಿಗಳ ಅಸಹಕಾರ ನಿರ್ಲಕ್ಷದ ವಿರುದ್ಧ ಚೇಗೂ ಗ್ರಾಮಸ್ಥರು ಸ್ವತಃ ತಾವೇ ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ :ಗ್ರಾಮಸ್ಥ ಪೆಡ್ಡಿ ಲೋಬೊ ಬೇಸರ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಚೇಗೂ ಗ್ರಾಮಸ್ಥರು ಅಧಿಕಾರಿಗಳ ಅಸಹಕಾರ ಮತ್ತು ನಿರ್ಲಕ್ಷ್ಯದ ವಿರುದ್ಧ ಸ್ವತಃ ತಾವೇ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಈ ಬಗ್ಗೆ ಗ್ರಾಮಸ್ಥ ಪೆಡ್ಡಿ ಲೋಬೊ ಮಾತನಾಡಿ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಯಮಸ್ವರೂಪಿಯಾಗಿ ಮಾರ್ಪಟ್ಟಿದ್ದ ರಸ್ತೆ ಗುಂಡಿಗಳಿಂದಾಗಿ ಪ್ರತಿದಿನ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ಹಲವು ಬಾರಿ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಕೊನೆಗೆ ಅಧಿಕಾರಿಗಳ ಭರವಸೆಗೆ ಕಾಯದೇ ಬೇಸತ್ತ ಸ್ಥಳೀಯ ನಿವಾಸಿಗಳು ಮತ್ತು ಗ್ರಾಮಸ್ಥರು ಒಟ್ಟಾಗಿ ಸೇರಿ, ತಮ್ಮ ಸ್ವಂತ ಖರ್ಚಿನಲ್ಲಿ ಅಗತ್ಯ ಸಾಮಗ್ರಿಗಳನ್ನು ಬಳಸಿ ಗುಂಡಿ ಬಿದ್ದಿದ್ದ ರಸ್ತೆಯನ್ನು ಯಶಸ್ವಿಯಾಗಿ ದುರಸ್ತಿಗೊಳಿಸಿದ್ದಾರೆ ಎಂದು ತಿಳಿಸಿದರು,

ಸಾರ್ವಜನಿಕರ ಸುರಕ್ಷತೆಗಾಗಿ ಗ್ರಾಮಸ್ಥರು ತೋರಿದ ಈ ಸ್ವಾವಲಂಬನೆ ಮತ್ತು ಸಾಮಾಜಿಕ ಕಳಕಳಿಗೆ ಈಗ ಶ್ಲಾಘನೆ ವ್ಯಕ್ತವಾಗುತ್ತಿದೆ.

ವರದಿ ✍️ಸೂರಿ ಬಣಕಲ್