ಬಣಕಲ್ : ಮೂಡಿಗೆರೆ ತಾಲ್ಲೂಕಿನ ಬಣಕಲ್ನಲ್ಲಿ ದಸರಾ ಮಹೋತ್ಸವದ ಅಂಗವಾಗಿ ಮಂಗಳವಾರ (ಅಕ್ಟೋಬರ್ 20, 2026) ಭವ್ಯವಾದ ದೇವಿಯ ಮೆರವಣಿಗೆ ನಡೆಯಲಿದ್ದು, ಅದಕ್ಕಾಗಿ ಕ್ಷಣಗಣನೆ ಆರಂಭವಾಗಿದೆ.
ಬಣಕಲ್ ಪಟ್ಟಣದಲ್ಲಿ ದಸರಾ ಹಬ್ಬದ ಆಚರಣೆಯು ಭಕ್ತಿ ಮತ್ತು ಸಡಗರದಿಂದ ಸಾಗುತ್ತಿದ್ದು, ಮೆರವಣಿಗೆಯ ದಿನದಂದು ವಿವಿಧ ಕಲಾತಂಡಗಳು, ಸ್ತಬ್ಧಚಿತ್ರಗಳು ಮತ್ತು ಆಕರ್ಷಕ ವಿದ್ಯುತ್ ದೀಪಾಲಂಕಾರಗಳೊಂದಿಗೆ ದೇವಿಯ ಮೂರ್ತಿಯನ್ನು ಪ್ರಮುಖ ರಸ್ತೆಗಳಲ್ಲಿ ರಾಜಬೀದಿ ಉತ್ಸವ ಮಾಡಲಾಗುತ್ತದೆ.
ಸಾರ್ವಜನಿಕರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ ಎಂದು ಸಾವರ್ಕರ್ ಯುವ ಪ್ರತಿಷ್ಠಾನ(ರಿ,) ಬಣಕಲ್ ಇವರು ಮನವಿ ಮಾಡಿದ್ದಾರೆ
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ