ಬಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮನೆಗಳಲ್ಲಿ ಪರವಾನಗಿ ಇಲ್ಲದೆ ಮಧ್ಯ ಮಾರಾಟ ಮಾಡುವ ಹಾಗಿಲ್ಲ :ಗ್ರಾಮಸ್ಥರಿಂದ ಸಭೆಯಲ್ಲಿ ತೀರ್ಮಾನ

ಬಣಕಲ್ ಬಿ. ಹೊಸಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಮತ್ತು ಮಹಿಳೆಯರು ಒಟ್ಟಾಗಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹತ್ವದ ಸಭೆ ನಡೆಸಿ, ದೃಢ ನಿರ್ಧಾರ ಕೈಗೊಂಡಿದ್ದಾರೆ.

ಬಿ. ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುವ ಜಾಲವು ವ್ಯಾಪಕವಾಗಿ ಹಬ್ಬಿದ್ದು ಇದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ತೀವ್ರ ಕಾಳಜಿಯಿಂದ ಗ್ರಾಮಸ್ಥರು ವಿಶೇಷವಾಗಿ ಗ್ರಾಮದ ಮಹಿಳೆಯರು ಹಾಗೂ ಹಲವು ಸಂಘ ಸಂಸ್ಥೆಗಳು ಸೇರಿ ಮಧ್ಯ ಮಾರಾಟವನ್ನು ನಿಷೇದಿಸುವ ಕುರಿತು ವಿಶೇಷ ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಕಂಡುಬಂದಲ್ಲಿ ತಕ್ಷಣವೇ ಮಾಹಿತಿ ನೀಡಿ ಸಹಕರಿಸುವಂತೆ ಬಣಕಲ್ ಠಾಣಾ ಪಿ.ಎಸ್.ಐ ದಿಲೀಪ್ ಕುಮಾರ್ ಗ್ರಾಮಸ್ಥರಲ್ಲಿ ಮನವಿ ಮಾಡಿದರು

ಮಾಹಿತಿ ನೀಡುವ ಸಾರ್ವಜನಿಕರ ಅಥವಾ ಗ್ರಾಮಸ್ಥರ ಹೆಸರು ಮತ್ತು ವಿವರಗಳನ್ನು ಸಂಪೂರ್ಣವಾಗಿ ಗೌಪ್ಯವಾಗಿಡಲಾಗುತ್ತದೆ.
ಪರವಾನಗಿ ಇಲ್ಲದೆ ಕಿರಾಣಿ ಅಂಗಡಿ, ಅಥವಾ ಮನೆಗಳಲ್ಲಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಪ್ರಕರಣ ದಾಖಲಿಸಲಾಗುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.