ಜಿಲ್ಲಾ ಮಟ್ಟದ ಶಾಟ್‌ಪುಟ್ ಸ್ಪರ್ಧೆಯಲ್ಲಿ ಉರ್ದು ಶಾಲೆಯ ಶಗುಫ್ತ ಫಾತಿಮ ಸಾಧನೆ – ರಾಜ್ಯ ಮಟ್ಟಕ್ಕೆ ಆಯ್ಕೆ

ಬಣಕಲ್: ಬಾಳೆಹೊನ್ನೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಾಟ್‌ಪುಟ್ ಸ್ಪರ್ಧೆಯಲ್ಲಿ ಉರ್ದು ಶಾಲೆಯ ವಿದ್ಯಾರ್ಥಿನಿ ಶಗುಫ್ತ ಫಾತಿಮ ಅವರು ಗೆಲುವು ದಾಖಲಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ವಿದ್ಯಾರ್ಥಿನಿಯ ಈ ಸಾಧನೆಯು ಶಾಲೆಗೆ ಹಾಗೂ ಊರಿಗೆ ಹೆಮ್ಮೆಯ ಕ್ಷಣವಾಗಿದೆ. ಶಗುಫ್ತ ಫಾತಿಮ ಅವರ ಕ್ರೀಡಾ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದು, ರಾಜ್ಯ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.


ವರದಿ ✍️ಸೂರಿ ಬಣಕಲ್