ಮನ ಸೂರೆಗೊಂಡ ಪ್ರತಿಭಾ ಕಾರಂಜಿ: ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗೆ ವೇದಿಕೆಯಾದ ಮೂಡಿಗೆರೆ ಜೆ.ಎಸ್. ಆಂಗ್ಲ ಮಾಧ್ಯಮ ಶಾಲೆ

ಮೂಡಿಗೆರೆ: ಶಾಲಾ ಶಿಕ್ಷಣ ಇಲಾಖೆ, ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ವತಿಯಿಂದ ದಿನಾಂಕ 21-11-2026ರ ಶನಿವಾರದಂದು ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಣಕಲ್‌ನ H.K.A. ಮೆಮೋರಿಯಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ A.C. ಆಸೀಫ್ ಇಕ್ಬಾಲ್ ಅವರು ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಮೂಡಿಗೆರೆ ತಾಲ್ಲೂಕು ಅಧ್ಯಕ್ಷರಾದ ಶ್ರೀಯುತ D.K. ಲಕ್ಷ್ಮಣ ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕರಾದ ಹೇಮಂತ್ ಚಂದ್ರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹಾಗೂ ತಾಲ್ಲೂಕು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿಯಾದ ಶಿವಕುಮಾರ್ ಡಿ., ಸಮೂಹ ಸಂಪನ್ಮೂಲ ವ್ಯಕ್ತಿ ಸುನಿಲ್ T.L., ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಮಂಜಪ್ಪ H., ಚಿಕ್ಕಮಗಳೂರು ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಫೈರೋಜ್ ಅಹಮ್ಮದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಹಾಗೂ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಗಂಗಾಧರಪ್ಪ G.L., ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಲವೀನ ಲೋಬೊ, ಕರಾವಳಿ ಟ್ರೇಡರ್ಸ್‌ನ ಶರೀಫ್, ಉರ್ದು ಪ್ರಾಥಮಿಕ ಶಾಲೆಯ ಅಧ್ಯಕ್ಷರಾದ ಅಸ್ಗರ್ ಆಲಿ, ಶರೀಫ್ A.M. ಟ್ರೇಡರ್ಸ್, ಸೋಮಶೇಖರಯ್ಯ ಸಮೂಹ ಸಂಪನ್ಮೂಲ ವ್ಯಕ್ತಿ ಸಾವಿತ್ರಿ, ಸಮಾಜ ಸೇವಕಿ ಫಿಶ್ ಮೋನಾಕಾ, ಬಣಕಲ್ ಕಾಲೇಜಿನ ನಿರ್ದೇಶಕರಾದ ಉಮರ್ B.A., ಮೂಡಿಗೆರೆ ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯರಾದ ಮನೋಜ್ ಕುಮಾರ್, J.S. ಎಜುಕೇಷನಲ್ ಸೊಸೈಟಿಯ ಅಧ್ಯಕ್ಷರಾದ ಗಯಾಝುದ್ದೀನ್, ನೀಲಂ ಟೆಕ್ಸ್‌ಟೈಲ್ಸ್ ಮಾಲೀಕರಾದ ದಿನೇಶ್, ವೆಹಿಕಲ್ ಅಸೋಸಿಯೇಷನ್ ಅಧ್ಯಕ್ಷರಾದ ಝಕೀರ್ ಹುಸೈನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ನವೀನ್ B.R. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಶಾಲಾ ಸಂಚಾಲಕರಾದ ಶ್ರೀಯುತ ಮೊಹಮ್ಮದ್ ಇಮ್ರಾನ್ ಅವರ ನೇತೃತ್ವದಲ್ಲಿ ಕಾರ್ಯಕ್ರಮವು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು

ಜೆ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಇದೇ ಸಂದರ್ಭದಲ್ಲಿ 2026-27ನೇ ಸಾಲಿನ ಪ್ರಾಥಮಿಕ ಶಾಲೆಗಳ ವಲಯ-2 ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಗಳಲ್ಲಿ ಮೂಡಿಗೆರೆಯ ಜೆ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆ, ಸೃಜನಶೀಲತೆ, ಕಲಾ ಕೌಶಲ್ಯ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಅತ್ಯುತ್ತಮವಾಗಿ ಪ್ರದರ್ಶಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಶಾಲಾ ಆಡಳಿತ ಮಂಡಳಿ, ಸಂಚಾಲಕರು ಹಾಗೂ ಶಿಕ್ಷಕ ವೃಂದದ ನಿರಂತರ ಮಾರ್ಗದರ್ಶನ ಮತ್ತು ಪರಿಶ್ರಮ ಪ್ರಮುಖ ಪಾತ್ರ ವಹಿಸಿದೆ.

ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಆಡಳಿತ ನಿರ್ದೇಶಕರಾದ ಶ್ರೀ ಮೊಹಮ್ಮದ್ ಇಮ್ರಾನ್, ಮುಖ್ಯೋಪಾಧ್ಯಾಯರು ಹಾಗೂ ಸಮಸ್ತ ಶಿಕ್ಷಕ ವೃಂದದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದ್ದಾರೆ.


ವರದಿ ✍️:ಸೂರಿ ಬಣಕಲ್