ಬಣಕಲ್‌ ಪ್ರೌಢಶಾಲೆಯಲ್ಲಿ ವೈಭವದಿಂದ ಜರುಗಿದ ವಲಯ ಮಟ್ಟದ ಪ್ರತಿಭಾ ಕಾರಂಜಿವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಗಣ್ಯರ ಅಭಿಪ್ರಾಯ

ಬಣಕಲ್: ಬಣಕಲ್ ವಿದ್ಯಾ ಸಂಸ್ಥೆ (ರಿ.) ಇದರ ನೇತೃತ್ವದಲ್ಲಿ ಬಣಕಲ್ ಪ್ರೌಢಶಾಲೆಯಲ್ಲಿ ನವೆಂಬರ್ 17ರಂದು ಬಣಕಲ್ ವಲಯ ಮಟ್ಟ-2ರ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಅತ್ಯಂತ ವೈಭವದಿಂದ ಹಾಗೂ ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಆಥಿಕಾ ಬಾನು ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಹೇಮಂತ್ ಚಂದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಭಾ ಕಾರಂಜಿಯ ಮಹತ್ವ ಮತ್ತು ಉದ್ದೇಶಗಳ ಕುರಿತು ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ಜಗದೀಶ್ ನಾಯ್ಕ್ ಅವರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವನ್ನು ತಿಳಿಸಿ, ಮಕ್ಕಳ ಸಾಧನೆಯನ್ನು ಕೊಂಡಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಣಕಲ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬಿ.ಎಲ್. ದಿವಾಕರ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಆಶೀರ್ವದಿಸಿದರು.

ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಹಾಗೂ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲು ಉತ್ತಮ ವೇದಿಕೆಯಾಗಿವೆ. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಹಕರಿಸಿದ ಎಲ್ಲರಿಗೂ ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.


ವರದಿ ✍️ಸೂರಿ ಬಣಕಲ್