ಕರ್ನಾಟಕ ಪ್ರದೇಶ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ರಕ್ಷಾ ರಮಯ್ಯ ರವರು ಮತ್ತು ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಭವ್ಯ ಹಾಗೂ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳಾದ ಶ್ರೀ ಅನಿಲ್ ಕುಮಾರ್ ರವರ ಒಪ್ಪಿಗೆ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಇಮ್ರಾನ್ ರವರನ್ನು ನೇಮಕಗೊಳಿಸಲಾಗಿದೆ,, ಇಮ್ರಾನ್ ರವರ ಪಕ್ಷ ನಿಷ್ಠೆ ಹಾಗೂ ಹಲವು ವರ್ಷಗಳಿಂದ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿರುವ ಜನ ಪರ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ಇಮ್ರಾನ್ ರವರ ಕಾರ್ಯವೈಖರಿಯನ್ನು ಮೆಚ್ಚಿ ಕಾಂಗ್ರೆಸ್ ಪಕ್ಷ ಇಮ್ರಾನ್ ರವರನ್ನು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯನ್ನಾಗಿ ಆಯ್ಕೆಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.
