ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆಕೆ ಮಗನಿಗೆ ಗಂಭೀರ ಗಾಯವಾಗಿದೆ.ಬೇಲೂರಿನ ಹನುಮಂತ ನಗರದಲ್ಲಿ ಈ ಘಟನೆ ನಡೆದಿದೆ. ಬೇಲೂರಿನಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರನ್ನು ಚಾಲಕ ರಿಪೇರಿಗಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೇಲೂರು ತಾಲೂಕಿನ ಹನುಮಂತ ನಗರದಲ್ಲಿ 55 ವರ್ಷದ ಹೂವಮ್ಮ ಹಾಗೂ ಅವರ ಮಗ ಬೈಕಿನಲ್ಲಿ ತೆರಳುತಿದ್ದ ವೇಳೆಯಲ್ಲಿ ಹಿಂಬದಿಯಿಂದ ಶಾಸಕರ ಕಾರು ಡಿಕ್ಕಿಯಾಗಿದೆ..ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ