ಬಣಕಲ್ ಬಿ ಎಂ ರಸ್ತೆಯ ಪಾದಚಾರಿ ಮಾರ್ಗಕ್ಕೆ ಇಂಟರ್ ಲಾಕ್ ಭಾಗ್ಯ

ಬಣಕಲ್ : ಪ್ರಸಕ್ತ ಸಾಲಿನಲ್ಲಿ ಬಣಕಲ್ ಗ್ರಾಮ ಪಂಚಾಯಿತಿಯು ಹಲವಾರು ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ ಮಳೆ ಮುಕ್ತಾಯಗೊಂಡ ತಕ್ಷಣ ಗುಡ್ಡೆಟ್ಟಿ ಇಂದಿರಾನಗರ ರಸ್ತೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ ರಸ್ತೆ ಕಾಮಗಾರಿಗೆ ಸರಕಾರದಿಂದ ಅನುದಾನ ಬಿಡುಗಡೆ ಆಗಿದೆ, ಸದ್ಯದಲ್ಲೇ ಎಲ್ಲಾ ರಸ್ತೆಗಳಿಗೂ ಗುಂಡಿಗಳಿಂದ ಮುಕ್ತಿ ದೊರೆಯಲಿದೆ , ಈಗ ಬಣಕಲ್ ನ ಬಿ ಎಂ ರಸ್ತೆ(ಬಣಕಲ್ ಮತ್ತಿಕಟ್ಟೆ)ಯ ಪಾದಚಾರಿ ಮಾರ್ಗಕ್ಕೆ ಇಂಟರ್ ಲಾಕ್ ಭಾಗ್ಯದೊರಕಿದೆ ಮುಖ್ಯಮಂತ್ರಿ ಗ್ರಾಮ ವಿಕಾಸ್ ಯೋಜನೆಯಡಿಯಲ್ಲಿ ಗ್ರಾಮಪಂಚಾಯಿತಿಗೆ ಬಂದ 10ಲಕ್ಷ ಅನುದಾನದಲ್ಲಿ ಬಿ ಎಂ ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗದಲ್ಲಿ ಇಂಟರ್ ಲಾಕ್ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ, ಬಣಕಲ್ ಪಟ್ಟಣದ ಸರ್ಕಲ್ ನಿಂದ ಗ್ರಾಮ ಪಂಚಾಯಿತಿ ವರೆಗಿನ ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗಕ್ಕೆ 5ಮೀಟರ್ ವರೆಗೆ ಇಂಟರ್ಲಾಕ್ ಹಾಕುವ ಕೆಲಸ ಬಿರುಸಿನಿಂದ ನಡೆಯುತ್ತಿದೆ , ಗ್ರಾಮೀಣ ರಸ್ತೆ ಯೋಜನೆಗ್ರಾಮೀಣ ರಸ್ತೆ ಸಂಪರ್ಕವು ಗ್ರಾಮೀಣ ಕ್ಷೇತ್ರದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಹೆಚ್ಚಿಸುವಲ್ಲಿ ಪ್ರಮುಖ ಅಂಶವೆಂಬುದು ಬಹಳ ಹಿಂದಿನಿಂದಲೂ ಗುರುತಿಸಲ್ಪಟ್ಟಿದ್ದರೂ ಸಹ ಅನೇಕ ವರ್ಷಗಳಿಂದ ಸಮರ್ಪಕವಾಗಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಾಕಷ್ಟು ಪ್ರಾಶಸ್ತ್ಯ ದೊರಕಿಸಲು ಸಾಧ್ಯವಾಗಿರುವುದಿಲ್ಲ. ಗ್ರಾಮೀಣ ರಸ್ತೆಗಳ ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ತುರ್ತಾಗಿ ಗಣನೀಯ ಪ್ರಮಾಣದ ಬಂಡವಾಳ ಹೂಡಬೇಕಾದ ಅಗತ್ಯತೆ ಇರುತ್ತದೆ. ಪ್ರಸ್ತುತ ಪ್ರಮುಖವಾಗಿ ಮುಖ್ಯ ಮಂತ್ರಿ ಗ್ರಾಮ ವಿಕಾಸ್ ಯೋಜನೆಯಡಿಯಲ್ಲಿ ಗ್ರಾಮೀಣ ರಸ್ತೆಗಳನ್ನು ಉನ್ನತ ಮಟ್ಟಕ್ಕೆ ಕೊಡೋಯ್ಯುವ ಕಾಮಗಾರಿ ನಡೆಯುತ್ತಿದೆ