ಕಾಂಗ್ರೆಸ್ ಮುಖಂಡ ಬಿ,ಹೆಚ್, ಹಸೆನಬ್ಬ ವಿಧಿವಶ


ಬಣಕಲ್ ಕಾಂಗ್ರೆಸ್’ನ ಹಿರಿಯ ಮುಖಂಡರಾದ ಬಿ, ಹೆಚ್, ಹಸೆನಬ್ಬ(78) ಅನಾರೋಗ್ಯದಿಂದ ಇಂದಿರಾನಗರದ ತಮ್ಮ ಸ್ವಗೃಹದಲ್ಲಿ ನಿಧನರಾದರು, ಮೃತರು ಪತ್ನಿ ಹಾಗೂಇಬ್ಬರು ಪುತ್ರರು ಮೂವರು ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ಸದಾ ಮುಂದಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದ ಇವರು,
ಹಲವಾರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ಬಣಕಲ್ ಗ್ರಾಮ ಪಂಚಾಯಿತಿ ಸದಸ್ಯನಾಗಿ,
ಬಣಕಲ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಸದಸ್ಯರಾಗಿ, ಕಾರ್ಯನಿರ್ವಹಿಸಿದ್ದರು,
ಹಸೆನಬ್ಬರವರ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಆ ಭಗವಂತ ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಬಣಕಲ್ ನ್ಯೂಸ್ ಹಾಗೂ ಸಾರ್ವಜನಿಕರು ಪ್ರಾರ್ಥಿಸಿದ್ದಾರೆ.