ಚಿಕ್ಕಮಗಳೂರು : ಐವರು ಮಕ್ಕಳು ಸೇರಿದಂತೆ ಹತ್ತು ಜನ ಪ್ರಯಾಣಿಸುತ್ತಿದ್ದ ಕಾರು 13 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರು ಸಮೀಪ ನಡೆದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ ಮಹಿಳೆಗೆ ಪೆಟ್ಟಾಗಿದೆ.
ಆನೇಕಲ್ ನಿಂದ ಹೊರನಾಡಿಗೆ ತೆರಳುತ್ತಿದ್ದ ವೇಳೆಯಲ್ಲಿ ಬಾಳೆಹೊನ್ನೂರು ಸಮೀಪದ ವಾಟುಕುಡಿಗೆ ಸೇತುವೆ ಕಾರು ಡಿಕ್ಕಿ ಹೊಡೆದು 13 ಅಡಿ ಆಳದ ಕಂದಕಕ್ಕೆ ಬಿದ್ದಿದೆ.
ಇನ್ನು ಕಾರಿನಲ್ಲಿ ಕಾರಿನಲ್ಲಿ ಐವರು ಮಕ್ಕಳು, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರಿದ್ದರು ಎಂದು ತಿಳಿದುಬಂದಿದೆ.
ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಬಣಕಲ್ ನ್ಯೂಸ್ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.