ರಾಜ್ಯ ಚುನಾವಣಾ ಆಯೋಗವು 2021ರ ಜೂನ್ ತಿಂಗಳಿನಿಂದ 2022ರ ಮಾರ್ಚ್ ತಿಂಗಳವರೆಗೆ ಅವಧಿ ಮುಕ್ತಾಯವಾಗುವ 44 ಗ್ರಾಮ ಪಂಚಾಯತ್, ನ್ಯಾಯಾಲಯ ಪ್ರಕರಣ, ಇತರೆ ಕಾರಣಗಳಿಂದ ಚುನಾವಣೆ ನಡೆಯದೆ ಬಾಕಿ ಇದ್ದ 13 ಗ್ರಾಮ ಪಂಚಾಯತ್ ಗಳು ಒಟ್ಟು 57 ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿ ಉಳಿದಿರುವ 386 ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಿ ಆದೇಶಿಸಿದೆ.
ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಡಿ.13ರಂದು ಹೊರಡಿಸಲಿದ್ದು, ಡಿ.17ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಡಿ.18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಡಿ.20ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ಅವಕಾಶ ನೀಡಲಾಗಿದೆ. ಡಿ.27ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯಕವಿದ್ದರೆ ಡಿ.29ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ನಡೆಸಬಹುದು. ಡಿ.30ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ನಡೆಯಲಿದ್ದು, ಅಂದೆ ಫಲಿತಾಂಶ ಪ್ರಕಟಿಸಲಾಗುವುದು. ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಿ.13 ರಿಂದ 30ರವರೆಗೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ, ಮೂಡಿಗೆರೆ ತಾಲೂಕಿನ ಬಣಕಲ್, ತರುವೆ, ಬೆಳಗಾವಿ ತಾಲೂಕಿನ ಬಿಜಗರ್ಣಿ, ಬೆಳವಟ್ಟಿ, ಅಥಣಿ ತಾಲೂಕಿನ ಸವದಿ, ರಾಯಭಾಗ ತಾಲೂಕಿನ ಸಿದ್ದಾಪೂರ, ಯಲ್ಪಾರಟ್ಟಿ, ಯಡ್ರಂವ, ರಾಮದುರ್ಗ ತಾಲೂಕಿನ ತುರನೂರ, ಹಲಗತ್ತಿ, ಒಬಳಾಪೂರ.
