ಚಿಕ್ಕಮಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟದೊಳಗೆ ನುಗ್ಗಿದ ಘಟನೆ ನಡೆಸಿದೆ. ಈ ಅಪಘಾತದಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಇನ್ನುಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿ ಸಮೀಪ ಈ ಅಪಘಾತ ನಡೆದಿದೆ.
ಚಿಕ್ಕಮಗಳೂರಿನಲ್ಲಿ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ಮುಗಿಸಿಕೊಂಡು ಚಿಕ್ಕಮಗಳೂರಿನಿಂದ ಶಾಂತವೇರಿ ಮೂಲಕ ಶಿವಮೊಗ್ಗಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತೆರಳುತ್ತಿದ್ದರು.
ಮಧ್ಯಾಹ್ನದ ನಂತರ ಮಳೆ ಸುರಿಯಿತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ವಾಹನ ಅಪಘಾತಕ್ಕೀಡಾಗಿದೆ. ಬೆಂಗಾವಲು ವಾಹನದ ಸಿಬ್ಬಂದಿಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ವಾಹನ ಅಪಘಾತ ಸಂಭವಿಸುತ್ತಿದ್ದಂತೆ ಮಳೆಯ ನಡುವೆಯೂ ಡಿ. ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಿನಿಂದ ಇಳಿದು ಬಂದು ವಾಹನದಲ್ಲಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು.
ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.