ರಾಷ್ಟ ಕವಿ ಕುವೆಂಪು ಸೊಸೆ ರಾಜೇಶ್ವರಿ ತೇಜಸ್ವಿ ನಿಧನ

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾಷ್ಟ್ರಕವಿ ಕುವೆಂಪು ಸೊಸೆ ರಾಜೇಶ್ವರಿ ತೇಜಸ್ವಿ (85) ನಿಧನರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಇಂದು (ಡಿಸೆಂಬರ್ 14) ಕೊನೆಯುಸಿರೆಳೆದಿದ್ದಾರೆ. ಖ್ಯಾತ ಕವಿ, ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿಯವರು 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಜನಿಸಿದ್ದರು.

ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ ಪದವಿ ಪಡೆದ ಇವರು, 1966ರಲ್ಲಿ ಪೂರ್ಣಚಂದ್ರ ತೇಜಸ್ವಿ ಜೊತೆ ವಿವಾಹವಾಗಿದ್ದರು. “ನನ್ನ ತೇಜಸ್ವಿ” ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್ ನ ತೋಟದ ಮನೆಯಲ್ಲಿ ವಾಸವಾಗಿದ್ದ ರಾಜೇಶ್ವರಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ