ಚಂದ್ರಯಾನ -3ಬಿಗ್ ಸಕ್ಸಸ್ :ಬಣಕಲ್ ನಲ್ಲಿ ಪಟಾಕಿ ಹೊಡೆದು ಸಂಭ್ರಮಾಚರಣೆ

ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿದೆ. ಈ ಮೂಲಕ ಭಾರತ ಅಮೆರಿಕ, ರಷ್ಯಾ, ಚೀನಾದ ಬಳಿಕ ಐತಿಹಾಸಿಕ ಸಾಧನೆ ಮಾಡಿದ ಹಿನ್ನಲೆ ಬಣಕಲ್ ನಲ್ಲಿ ಯುವಕರಿಂದ ಪಟಾಕಿ ಹೊಡೆದು ಸಂಭ್ರಮಾಚರಣೆ ಮಾಡಿದರು.
ಭಾರತೀಯ ಬಾಹ್ಯಾಕಾಶ ನೌಕೆ ಸಂಜೆ 6.04 ಗಂಟೆಗೆ ಚಂದ್ರನ ಚಂದ್ರನ ದಕ್ಷಿಣ ದ್ರುವನ್ನು ತಲುಪಿದೆ.ಸಂಜೆ 5.45 ರಿಂದಲೇ ವಿಕ್ರಮ್ ಲ್ಯಾಂಡರ್ ನ ವೇಗವನ್ನು ತಗ್ಗಿಸುವ ಪ್ರಕ್ರಿಯೆ ಆರಂಭಿಸಿ ಚಂದ್ರನ ದಕ್ಷಿಣ ದ್ರುವದ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದೆ.ಈ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ತನ್ನ ಮೂರನೇ ಚಂದ್ರಯಾನದಲ್ಲಿ ಚಂದ್ರನ ಸ್ಪರ್ಶಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ತಲುಪಿದ ವಿಶ್ವದ ಮೊದಲ ದೇಶ ಭಾರತವಾಗಿದೆ.