ಬಣಕಲ್ ಗ್ರಾಮದ ಬಣಕಲ್ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಠಾಣೆಯ ಪಿ ಎಸ್ ಐ ರನ್ನಗೌಡ ಪಾಟೀಲ್ ಮಾತನಾಡಿ, ರಸ್ತೆಯಲ್ಲಿ ಸಂಚರಿಸುವಾಗ ಹಾಗೂ ದಾಟುವಾಗ ಅನುಸರಿಸಬೇಕಾದ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರದ ಇದ್ದಾಗ, ನಿಯಮಬಾಹಿರವಾಗಿ ನಡೆದುಕೊಂಡಲ್ಲಿ ಅವಘಡ ಸಂಭವಿಸುತ್ತದೆ ಎಂದು ತಿಳಿ ಹೇಳಿದರು.
ವಿದ್ಯಾರ್ಥಿಗಳು ತಮಗೆ ಆಗುತ್ತಿರುವ ಅನ್ಯಾಯವನ್ನು ಸಹಿಸಿಕೊಳ್ಳದೇ ಕಾನೂನಿನ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.ಜನರಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗಳ ಎಲ್ಲ ಠಾಣೆಯಲ್ಲಿ “ತೆರೆದ ಮನೆ’ ಎಂಬ ನೂತನ ಕಾರ್ಯಕ್ರಮ ಶುರುವಾಗಿದ್ದು, ಪೊಲೀಸರೆಂದರೆ ಜನಸಾಮಾನ್ಯರಲ್ಲಿ ಇರುವ ಭಯವನ್ನು ಚಿವುಟಿ ಹಾಕುವ ಮಹತ್ವದ ಕಾರ್ಯಕ್ರಮ ಇದಾಗಿದೆ ಎಂದರು ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೇ, ಪಿಸ್ತೂಲ್ ಯಾವಾಗ ಬಳಸು ತ್ತೀರಾ, ಕಳ್ಳರು ಹಿಡಿದು ಏನ್ ಮಾಡುತ್ತೀರಾ..’–ಇದು ಪೊಲೀಸ್ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗ ವಾಗಿ ಶಾಲಾ ಮಕ್ಕಳು ಠಾಣೆಗೆ ಭೇಟಿ ನೀಡಿದಾಗ ಕುತೂಹಲದ ಪ್ರಶ್ನೆಗಳನ್ನು ಠಾಣಾಧಿಕಾರಿಗೆ ಕೇಳಿ ಗೊಂದಲ ನಿವಾರಿಸಿಕೊಳ್ಳುತ್ತಿದ್ದರು.
ಪೊಲೀಸ್ ಎಂದರೆ ಸಾಮಾನ್ಯವಾಗಿ ಮಕ್ಕಳು ಭಯ ಪಡುವುದು ಸಹಜ. ಭಯ ತೊಲಗಿಸಿ, ಮಕ್ಕಳು ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ಮತ್ತು ರಕ್ಷಣೆ ಅವಶ್ಯವೆನಿಸಿದಾಗ ಪೊಲೀಸ್ ಸಹಾಯ ಪಡೆಯಲು ಮಕ್ಕಳ ಸ್ನೇಹಿ ವಾತಾವರಣ ಸೃಷ್ಠಿಸಲು ‘ತೆರೆದ ಮನೆ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿ ಜಗದೀಶ್, ವಿನಯ್, ಮಂಜುನಾಥ್ ಉಪಸ್ಥಿತರಿದ್ದರು
ವರದಿ :✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ