ಬಣಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಸುಜಿತ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಣಕಲ್: ಹಳಿಕೆಯಲ್ಲಿ ಜರುಗಿದ ತಾಲ್ಲೂಕು ಮಟ್ಟದ ಆಟೋಟ ಸ್ಪರ್ಧೆಗಳಲ್ಲಿ ಬಣಕಲ್ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಯಾದ ಸುಜಿತ್ ಜಿ.ಕೆ. ಅವರು ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸುವುದರ ಮೂಲಕ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಶಾಲೆಯ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕರು, ಹಾಗೂ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.

ವರದಿ :ಸೂರಿ ಬಣಕಲ್