ಮಾದಕ ವಸ್ತುಗಳ ಸೇವನೆಯಿಂದ ಯುವ ಜನಾಂಗ ಅಡ್ಡ ದಾರಿ ಹಿಡಿಯುತ್ತಿದೆ. ಇಂತಹ ಸಂದರ್ಭದಲ್ಲಿ ಯಾವುದೇ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಸ್ವಾಸ್ಥ್ಯ ಸದೃಡ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಸಂಪನ್ಮೂಲ ಹಾಗೂ ಶೌರ್ಯ ಘಟಕದ ಪ್ರತಿನಿಧಿ ಸುರೇಶ್ ಹೇಳಿದರು.
ಬಣಕಲ್ ನ ವಿದ್ಯಾಭಾರತಿ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಏರ್ಪಡಿಸಿದ ಸ್ವಾಸ್ಥ್ಯ ಸಂಕಲ್ಪ ತಂಬಾಕು ವಿರೋಧಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರುಯುವಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಕ್ಷಣಿಕ ಸುಖದ ಭ್ರಮೆಯಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ತಮಗೆ ಅರಿವಿಲ್ಲದಂತೆ ತಮ್ಮ ಬದುಕುನ್ನು ನಾಶ ಮಾಡಿಕೊಳ್ಳುತ್ತಿರುವುದು ಸಾಮಾಜಿಕ ದುರುಂತವಾಗಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.ನಂತರ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞೆ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.
ಈ ಸಂದರ್ಭದಲ್ಲಿ ಬಣಕಲ್ ವಲಯ ಮೇಲ್ವಿಚಾರಕರು ವಿಜಯಕುಮಾರ್, ಸೇವಾ ಪ್ರತಿನಿಧಿ ರೇವತಿ, ಸಮಾಜ ಸೇವಕ ಆರಿಫ್ ಬಣಕಲ್ ಸೇರಿದಂತೆ ಇತರರಿದ್ದರು.
ವರದಿ :✍️ಸೂರಿ ಬಣಕಲ್