ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಖಚಿತವಾಗುತ್ತಿದ್ದಂತೆ ಹಲವು ನಾಯಕರು ಪಕ್ಷಗಳಿಗೆ ಗುಡ್ಬೈ ಹೇಳ್ತಿದ್ದಾರೆ. ಸದ್ಯ ಈ ಸಾಲಿಗೆ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಸೇರ್ಪಡೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಸಮಾಧಾನಿತ ಬಿಜೆಪಿ ನಾಯಕರ ಆಪರೇಷನ್ ಹಸ್ತ ಟಾಸ್ಕ್ ಪಡೆದುಕೊಂಡಿದ್ದರು ಎನ್ನಲಾಗಿದ್ದು,
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಇಂದು ಇಬ್ಬರು ಮಾಜಿ ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.ಮೂಡಿಗೆರೆ ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ, ಶಿರಹಟ್ಟಿ ಮಾಜಿ ಶಾಸಕ ರಾಮಪ್ಪ ಲಮಾಣಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಇಬ್ಬರು ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಾಜಿ ಶಾಸಕರಾಗಿದ್ದು, ಟಿಕೆಟ್ ಮಿಸ್ ಆಗಿದ್ದರಿಂದ ರಾಮಪ್ಪ ಅವರು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಅಲ್ಲದೇ, ಕುಮಾರಸ್ವಾಮಿ ಅವರು ಕೂಡ ಪಕ್ಷಕ್ಕೆ ಗುಡ್ಬೈ ಹೇಳಿ ಜೆಡಿಎಸ್ಗೆ ಸೇರ್ಪಡೆಯಾಗಿದ್ದರು ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಹಾದಿ ತಿಳಿದಿವೆ. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರು ಮಾಜಿ ಶಾಸಕರು ಅಕ್ಟೋಬರ್ 10ನೇ ತಾರೀಖಿನ ಒಳಗೆ ಕಾಂಗ್ರೆಸ್ಗೆ ಸೇರ್ಪಡೆಯಾಗುವ ನಿರೀಕ್ಷೆ ಇದೆ. ಡಿಕೆ ಶಿವಕುಮಾರ್ ಭೇಟಿ ವೇಳೆಯೇ ಮಾಜಿ ಶಾಸಕರು ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರಂತೆ.
ಕಾಂಗ್ರೆಸ್ ಎಂಎಲ್ಸಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮೂಲಕ ಕಾಂಗ್ರೆಸ್ ಪಡೆ ಬಿಜೆಪಿಯ ಅಸಮಾಧಾನಿತ ನಾಯಕರಿಗೆ ಗಾಳ ಹಾಕುತ್ತಿದೆ ಅಂತ ಹೇಳಲಾಗುತ್ತಿದೆ. ಆಪರೇಷನ್ ಹಸ್ತ ಸದ್ದು ಮಾಡುತ್ತಿರುವ ಸಮಯದಲ್ಲೇ ಶೆಟ್ಟರ್ ಸಮ್ಮುಖದಲ್ಲಿ ಬಿಜೆಪಿ ಮಾಜಿ ಶಾಸಕರು ಇಂದು ಡಿಕೆಶಿ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ