ಬಣಕಲ್ :ಸೋಮವಾರ ಬಣಕಲ್ ಘಟಕದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ 169 ನೇ ನಾರಾಯಣ ಗುರು ಜಯಂತಿಯನ್ನು ಏರ್ಪಡಿಸಲಾಗಿತ್ತು, ಕಾರ್ಯಕ್ರಮದಲ್ಲಿ ಶ್ರೀ ವಾಸು ಪೂಜಾರಿ, ಕಾರ್ಯದರ್ಶಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಒಕ್ಕೂಟ ಚಿಕ್ಕಮಗಳೂರು ಜಿಲ್ಲೆ ಇವರನ್ನು ಸನ್ಮಾನಿಸಲಾಯಿತು ಹಾಗೂ 2022ನೇ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿ ನೇಹಾ ಅವರನ್ನು ಸನ್ಮಾನಿಸಲಾಯಿತು, ಮತ್ತು ಈ ಕಾರ್ಯಕ್ರಮಕ್ಕೆ ಆಗಮಿಸಿದ ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಎಲ್ಲಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಬಣಕಲ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಬಿಲ್ಲವ ಬಾಂಧವರಿಗೆ ಕಾರ್ಯಕ್ರಮ ಯಶಸ್ವಿ ಗೊಳಿಸಿದಕ್ಕಾಗಿ ಬಣಕಲ್ ಘಟಕದಿಂದ ಅಭಿನಂದನೆ ಸಲ್ಲಿಸಿದರು.
ವರದಿ:✍️ಸೂರಿ ಬಣಕಲ್